- Advertisement -
![]()
- Advertisement -
ನವದೆಹಲಿ: ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟಿಕಾಯತ್ ರವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸೋಮವಾರ ಕರೆ ಕೊಟ್ಟಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಇಡೀ ದೇಶಾದ್ಯಂತ ಬಂದ್ ಕರೆಗೆ ರೈತರು ಪೂರ್ಣ ಪ್ರಮಾಣದಲ್ಲಿ ಬೆಂಬಲ ನೀಡಿದ್ದು, ನಮ್ಮ ಭಾರತ್ ಬಂದ್ ಯಶಸ್ವಿಯಾಗಿದೆ. ಜನರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ನಾವು ರಸ್ತೆ ತಡೆ, ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯನ್ನು ಮಾಡಿಲ್ಲ ಎಂದು ತಿಳಿಸಿದ್ದಾರೆ.
ಸರ್ಕಾರದ ಜೊತೆ ಮಾತುಕತೆ ನಡೆಸಲು ಇನ್ನು ಅವಕಾಶ ದೊರೆಕಿಲ್ಲ, ಅವಕಾಶ ದೊರೆಕಿದರೆ ನಾವೂ ಮಾತನಾಡಲು ಸಿದ್ದರಿದ್ದೇವೆ ಎಂದಿದ್ದಾರೆ.
- Advertisement -


