Saturday, June 6, 2026
Homeಕರಾವಳಿಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ!

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ!

- Advertisement -
- Advertisement -

ಪುತ್ತೂರು : ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿ ಮೈಮುಟ್ಟಿ ಕಿರುಕುಳ ನೀಡಿದ ಆರೋಪವೊಂದು ಬುಧವಾರ ಪುತ್ತೂರು ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೇಳಿಬಂದಿದೆ.

ಪುತ್ತೂರಿನ ಕಾಲೇಜೊಂದರಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಮಯದಲ್ಲಿ ಅಲ್ಲಿಗೆ ಬಂದ ಯುವಕನೋರ್ವ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆಂದು ಯುವತಿ ಆರೋಪಿದ್ದಾಳೆ.

ಇತರ ವಿದ್ಯಾರ್ಥಿಗಳು ಆಕೆಯಲ್ಲಿ ವಿಚಾರಿಸಿದಾಗ ಕಿರುಕುಳ ನೀಡಿರುವ ವಿಷಯವನ್ನು ಅವರಲ್ಲಿ ತಿಳಿಸಿದ್ದಾಳೆ. ಕಿರುಕುಳ ನೀಡಿರುವ ಯುವಕನ ಪೋಟೋವನ್ನು ತನ್ನ ಇನ್ಸ್ಟಾಗ್ರಾಂನಿಂದ ತೆಗೆದು ಕಿರುಕುಳ ನೀಡಿದ ವ್ಯಕ್ತಿಯನ್ನು ಸಹಪಾಠಿಗಳಿಗೆ ತೋರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆ ಪೋಟೋದ ಆಧಾರದಲ್ಲಿ ವಿದ್ಯಾರ್ಥಿಗಳು ಕಿರುಕುಳ ನೀಡಿದ್ದಾನೆ ಎಂದು ಹೇಳಲಾದ ಯುವಕನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಆ ಯುವಕನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಯುವಕನನ್ನು ಮಹಿಳಾ ಠಾಣೆಗೆ ಹಸ್ತಾಂತರಿಸಲಾಗಿದೆ.

- Advertisement -

Latest News

error: Content is protected !!