- Advertisement -
- Advertisement -
ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯೋರ್ವರು ಅ.1 ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರಲ್ಲಿ ಅನಾರೋಗ್ಯ ಕಂಡುಬಂದಿತ್ತು. ಸಹೋದ್ಯೋಗಿಗಳು ಮನೆಗೆ ಹೋಗಲು ಹೇಳಿದ್ದರು. ನಂತರ ಮನೆಗೆ ತೆರಳಿದ್ದ ಸಿದ್ಧಾರ್ಥ್ ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಊರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ನೆಹರುನಗರ ರಕ್ತೇಶ್ವರಿ ನಿವಾಸಿಯಾಗಿದ್ದ ಇವರು 2002 ನೇ ಬ್ಯಾಚಿನಲ್ಲಿ ತರಬೇತಿ ಪಡೆದಿದ್ದರು. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.
- Advertisement -