Wednesday, July 2, 2025
Homeಕರಾವಳಿಪ್ರಚೋದನಾಕಾರಿ ಭಾಷಣ : ಚೈತ್ರ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು!

ಪ್ರಚೋದನಾಕಾರಿ ಭಾಷಣ : ಚೈತ್ರ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು!

spot_img
- Advertisement -
- Advertisement -

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿಯ ವತಿಯಿಂದ ನಡೆದ ಹಿಂದೂ ಜನಜಾಗೃತಿ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಚೈತ್ರಾ ಕುಂದಾಪುರ ಅಶ್ಲೀಲ, ಕಾನೂನುಬಾಹಿರ ಪದಗಳನ್ನು ಬಳಸಿ ಪ್ರಚೋದನಕಾರಿ ಭಾಷಣ ಮಾಡಿರುವುದು ಮಾಧ್ಯಮಗಳು ಸಹಿತ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿತ್ತು. ಭಾಷಣ ಸಮಾಜದ ಸ್ವಾಸ್ಥವನ್ನು ಕದಡುವ, ಮತೀಯ ಘರ್ಷಣೆಗೆ ಕಾರಣವಾಗುವ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ.

ಚೈತ್ರ ಕುಂದಾಪುರ ಭಾಷಣದಲ್ಲಿ ತುಳುನಾಡಿನ ಕಾರಣಿಕ ಪುರುಷರು, ಆರಾಧ್ಯ ದೈವಗಳಾದ ಕೋಟಿ ಚೆನ್ನಯರನ್ನು ದುರುಪಯೋಗಪಡಿಸಿ ತುಳುವರ ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡಿದ್ದಾಳೆ. ಕೋಟಿ ಚೆನ್ನಯರು ಹಿಡಿಯುವ ಸುರಿಯ ಎಂಬ ಪವಿತ್ರ ಆಯುಧವನ್ನು ರೌಡಿಗಳು ಕೋಮು ಘರ್ಷಣೆಯಲ್ಲಿ ಬಳಸುವ ತಲವಾರಿಗೆ ಹೋಲಿಸಿರುವುದು ಈಕೆಯ ಭಾಷಣದಲ್ಲಿ ದೆ. ಆಘಾತಕಾರಿ, ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡುವ ಪ್ರಯತ್ನ ಇದಾಗಿದೆ ಎಂದು ದೂರಲಾಗಿದೆ.

ಇದೇ ಸಭೆಯಲ್ಲಿ ಬಂಟ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರೊಬ್ಬರ ಮಗಳಿಗೆ ಮುಸ್ಲಿಂ ಯುವಕನೊಂದಿಗೆ ಪ್ರೇಮ ಸಂಬಂಧವಿದೆ. ಆತನೊಂದಿಗೆ ಮದುವೆಗೆ ಹಠ ಹಿಡಿದಿದ್ದಾಳೆ ಎಂದು ಹೇಳಿರುವುದು ವರದಿಯಾಗಿದೆ. ಇದು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗುವ ಸನ್ನಿವೇಶಕ್ಕೆ ಎಡೆ ಮಾಡಿಕೊಡಬಹುದು. ಇದು ಕಾಂಗ್ರೆಸ್, ಬಂಟ ಸಮುದಾಯದ ಘನತೆಗೆ ಏಕಕಾಲದಲ್ಲಿ ಸಾರ್ವಜನಿಕವಾಗಿ ಕುಂಟು ಉಂಟು ಮಾಡುವಂತಿದೆ.

ಈಕೆಯ ಭಾಷಣ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಠಾಣೆಯ ಪೊಲೀಸರ ಸಮ್ಮುಖದಲ್ಲಿ ನಡೆದಿರುವುದರಿಂದ ಈ ಎಲ್ಲಾ ವಿಷಯಗಳು ತಮ್ಮ ಗಮನಕ್ಕೆ ಬಂದಿರುತ್ತದೆ. ಈ ವಿಷಯದ ಸಾಮಾಜಿಕ, ರಾಜಕೀಯ ಗಂಭೀರತೆಯನ್ನು ಮನಗಂಡು ತಾವು ಭಾಷಣಕಾರ್ತಿ ಚೈತ್ರ ಹಾಗೂ ಕಾರ್ಯಕ್ರಮ ಸಂಯೋಜಕರನ್ನು ಬಂಧಿಸಿ ಸರಿಯಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!