Sunday, June 7, 2026
Homeಕರಾವಳಿಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ,ಪ್ರಜ್ಞೆ ತಪ್ಪಿಸಿ ಸಾಮೂಹಿಕ ಅತ್ಯಾಚಾರ; ಪೋಕ್ಸೊ ಪ್ರಕರಣ ದಾಖಲು!

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ,ಪ್ರಜ್ಞೆ ತಪ್ಪಿಸಿ ಸಾಮೂಹಿಕ ಅತ್ಯಾಚಾರ; ಪೋಕ್ಸೊ ಪ್ರಕರಣ ದಾಖಲು!

- Advertisement -
- Advertisement -

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ಸೇರಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಎನ್ನಲಾಗುತ್ತಿದೆ. ಬಂಟ್ವಾಳದ ಎಸ್ ವಿ ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ ಬಾಲಕಿಯನ್ನು ಪರಿಚಿತರೇ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಿದ್ದಾರೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಟಾಡಿಯಲ್ಲಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.

ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಶೀಘ್ರ ಬಂಧಿಸುವ ಸಾಧ್ಯತೆ ಇದೆ. ಸದ್ಯ ಬಾಲಕಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

- Advertisement -

Latest News

error: Content is protected !!