Wednesday, June 3, 2026
Homeಅಪರಾಧಬಂಟ್ವಾಳ : ಶೀಘ್ರದಲ್ಲೇ ನ್ಯಾಯಾಲಯದ ಮೆಟ್ಟಿಲೇರಲಿರುವ ಸಾಮೂಹಿಕ ಅತ್ಯಾಚಾರ ಆರೋಪಿಗಳು!

ಬಂಟ್ವಾಳ : ಶೀಘ್ರದಲ್ಲೇ ನ್ಯಾಯಾಲಯದ ಮೆಟ್ಟಿಲೇರಲಿರುವ ಸಾಮೂಹಿಕ ಅತ್ಯಾಚಾರ ಆರೋಪಿಗಳು!

- Advertisement -
- Advertisement -

ಬಂಟ್ವಾಳ : ಬಾಲಕಿಯೊಬ್ಬಳನ್ನು ಪುಸಲಾಯಿಸಿ ಮಂಗಳೂರಿಗೆ ಬರಹೇಳಿ ಅಲ್ಲಿನ ಲಾಡ್ಜ್ ಒಂದರಲ್ಲಿ ಸಂಗಡಿಗರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳಿದ್ದು ಅವರೆಲ್ಲರನ್ನೂ ಬಂಧಿಸಲಾಗಿದೆ ಹಾಗೂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ರವಿವಾರ ಬಂಟ್ವಾಳ ಎಎಸ್ಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶುಕ್ರವಾರ ಬೆಳಗ್ಗೆ ತಾನು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿಳಿ ಕಾರಿನಲ್ಲಿ ಬಂದ ತಂಡವೊಂದು ನನ್ನನ್ನು ಅಪಹರಣ ಮಾಡಿ ಅಜ್ಞಾತ ಸ್ಥಳದಲ್ಲಿ ಅತ್ಯಾಚಾರ ನಡೆಸಿದೆ ಎಂದು ಬಾಲಕಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಳು. ಬಾಲಕಿಯ ದೂರಿನಂತೆ ಪ್ರಕರಣ ದಾಖಲಿಸಿದ ಬಂಟ್ವಾಳ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣದ ಸತ್ಯಾಂಶ ಬಯಲಾಗಿದೆ ಎಂದು ಹೇಳಿದರು.

ಇದೇ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಎಸ್ಪಿ, ಘಟನೆಯ ಕುರಿತಾಗಿ ಆರಂಭಿಕ ಆರೋಪದಲ್ಲಿದ್ದಂತೆ ಬಾಲಕಿ ಅಪಹರಣ ಆಗಿಲ್ಲ, ಪರಿಚಿತನಾದ ಶರತ್ ಶೆಟ್ಟಿಯ ಕೋರಿಕೆಯಂತೆ ಬಾಲಕಿ ಮಂಗಳೂರಿಗೆ ಹೋಗಿದ್ದ ಸಂದರ್ಭ ಈ ಅಪರಾಧ ಕೃತ್ಯ ನಡೆದಿದೆ ಎಂದು ವಿವರಿಸಿದರು.ಕಾಪು ನಿವಾಸಿ ಕೆ.ಎಸ್.ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್ ಹಾಗೂ ಇದಾಯತ್ತುಲ್ಲ ಬಂಧಿತ ಆರೋಪಿಗಳಾಗಿದ್ದು ಅವರನ್ನು ಇಂದು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುವುದು ಎಂದು ಅವರು ತಿಳಿಸಿದರು.

- Advertisement -

Latest News

error: Content is protected !!