- Advertisement -
- Advertisement -
ನೆಲ್ಯಾಡಿ: ಹೆಂಡತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಆಕೆಯ ಪತಿಯು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರ ಮಧ್ಯಾಹ್ನದಂದು ಕೊಕ್ಕಡ ಗ್ರಾಮದ ಪುತ್ಯೆಯಲ್ಲಿ ನಡೆದಿದೆ.

ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ ರಶ್ಮಿತಾ(28ವ.) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದು ಮನೆಗೆ ಬಂದ ಆಕೆಯ ಪತಿ ರಾಜೇಶ್ ಆತ್ಮಹತ್ಯೆಗೆ ಮುಂದಾಗಿದ್ದು ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- Advertisement -