Monday, June 8, 2026
Homeಇತರಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು...! ಮಗು ತಂದೆ ಹಾಗೂ ತಾಯಿಯ ಡಿಎನ್ಎ ಪರೀಕ್ಷೆ ನಡೆಸಲು ನ್ಯಾಯಾಲಯ...

ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು…! ಮಗು ತಂದೆ ಹಾಗೂ ತಾಯಿಯ ಡಿಎನ್ಎ ಪರೀಕ್ಷೆ ನಡೆಸಲು ನ್ಯಾಯಾಲಯ ಅನುಮತಿ…!

- Advertisement -
- Advertisement -

ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು-ಬದಲು ಆಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮಗು ತಂದೆ ಹಾಗೂ ತಾಯಿಯ ಡಿಎನ್ಎ ಪರೀಕ್ಷೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.

ಹೆಣ್ಣು ಮಗುವಿನ ಬದಲು ಗಂಡು ಮಗುವನ್ನು ನೀಡಲಾಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ, ನಗರದ ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಅದರ ಆಧಾರದಲ್ಲಿ ಮಗು ಅಪಹರಣ ಪ್ರಕರಣ ದಾಖಲಾಗಿತ್ತು.

ಡಿಎನ್ಎ ಸ್ಯಾಂಪಲ್ ನ್ನು ಹೈದ್ರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಗಳಿಸುವ ಸಾಧ್ಯತೆ ಇದೆ. ವರದಿಯ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಸ್ತಫಾ ಅವರ ಪತ್ನಿ ಅಮ್ರೀನ್ ಸೆ. 28 ರಂದು ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಗಂಡು ಮಗುವಿಗೆ ಜನ್ಮ ನೀಡಿದ್ದು ಆದರೆ ಆಸ್ಪತ್ರೆಯ ದಾಖಲೆಗಳಲ್ಲಿ ಸಿಬ್ಬಂದಿಗಳು ಹೆಣ್ಣು ಮಗು ಎಂದು ತಪ್ಪಾಗಿ ನಮೂದಿಸಿದ್ದರು. ಮಗು ಅದಲು ಬದಲು ಆಗಿಲ್ಲ ಇದಕ್ಕಾಗಿ ಕ್ಷಮೆ ಯಾಚಿಸುತ್ತೇವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದರು.

- Advertisement -

Latest News

error: Content is protected !!