Friday, June 27, 2025
Homeಜ್ಯೋತಿಷ್ಯದಿನಭವಿಷ್ಯ: ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಮನಸ್ತಾಪವಾಗುವ ಸಾಧ್ಯತೆ

ದಿನಭವಿಷ್ಯ: ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಮನಸ್ತಾಪವಾಗುವ ಸಾಧ್ಯತೆ

spot_img
- Advertisement -
- Advertisement -

ಮೇಷ
ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ವೃಷಭ
ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 9

ಮಿಥುನ
ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 1

ಕರ್ಕ
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 8

ಸಿಂಹ
ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆಗಳಿವೆ. ಸ್ವಂತ ಉದ್ಯಮಿಗಳು ಉಂಟಾಗುವ ಹಾನಿಯಿಂದ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 4

ಕನ್ಯಾ
ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಮಖ್ಯೆ: 7

ತುಲಾ
ಹಳೆಯ ಸಾಲ ಮರುಪಾವತಿಯಾಗುವದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 3

ವೃಶ್ಚಿಕ
ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು. ಶುಭ ಸಂಖ್ಯೆ: 2

ಧನು
ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 5

ಮಕರ
ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ: 3

ಕುಂಭ
ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 6

ಮೀನ
ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವದು. ಶುಭ ಸಂಖ್ಯೆ: 1

- Advertisement -
spot_img

Latest News

error: Content is protected !!