- Advertisement -
- Advertisement -
ಧರ್ಮಸ್ಥಳ: ಗ್ರಾಮದ ಕೂಟದಕಲ್ಲು ಎಂಬಲ್ಲಿ ಮಹಿಳೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಇಲ್ಲಿನ ನಿವಾಸಿ ಮೋಹನ್ ಎಂಬವರ ಪತ್ನಿ ಸೌಮ್ಯ(29) ಎಂದು ಹೇಳಲಾಗಿದೆ. ಗಂಡ ಮನೆಯಿಂದ ಹೊರಗೆ ಹೋಗಿದ್ದ ವೇಳೆ ಮನೆಯ ಕೊಠಡಿಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಬ್ಬರು ಪುಟ್ಟ ಮಕ್ಕಳು ಮಾತ್ರ ಮನೆಯಲ್ಲಿದ್ದರು ಎನ್ನಲಾಗಿದ್ದು, ಮಕ್ಕಳು ಅಳುವುದು ಕೇಳಿ ನೆರೆಮನೆಯವರು ಮೋಹನ್ ಗೆ ಕರೆ ಮಾಡಿದ್ದಾರೆ. ಗಂಡ ಬಂದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಇವರು ಶಿರ್ಲಾಲು ಗ್ರಾಮದವರಾಗಿದ್ದು ಇಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಧರ್ಮಸ್ಥಳ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -