Sunday, June 14, 2026
Homeಅಪರಾಧಮುಂಬೈ : ಆರ್ಯನ್ ಖಾನ್ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನ ಅ.30 ರವರೆಗೆ ವಿಸ್ತರಣೆ;...

ಮುಂಬೈ : ಆರ್ಯನ್ ಖಾನ್ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನ ಅ.30 ರವರೆಗೆ ವಿಸ್ತರಣೆ; ಅನನ್ಯಗೆ ತೀವ್ರ ವಿಚಾರಣೆ!

- Advertisement -
- Advertisement -

ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಎನ್ ಸಿಬಿ ವಿಶೇಷ ಸೆಷನ್ಸ್ ಕೋರ್ಟ್ ಅಕ್ಟೋಬರ್ 30ರ ವರೆಗೆ ವಿಸ್ತರಿಸಿದೆ.

ಆರೋಪಿಗಳನ್ನು ದೈಹಿಕವಾಗಿ ಅಥವಾ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿಲ್ಲ. ಆರ್ಯನ್ ಖಾನ್ ಅವರನ್ನು ಈ ಮೊದಲು ಅಕ್ಟೋಬರ್ 7 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಏತನ್ಮಧ್ಯೆ, ಬಾಲಿವುಡ್ ನಟಿ ಅನನ್ಯಾ ಪಾಂಡೆಯವರ ಮುಂಬೈ ನಿವಾಸದ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡ್ರಗ್ಸ್ ಆನ್ ಕ್ರೂಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ನಂತರ, ಅನನ್ಯಾ ಪಾಂಡೆ ಅವರು ತಮ್ಮ ತಂದೆ ಹಾಗೂ ನಟ ಚಂಕಿ ಪಾಂಡೆಯೊಂದಿಗೆ ಎನ್‌ಸಿಬಿ ಕಚೇರಿಗೆ ವಿಚಾರಣೆಗೂ ತೆರಳಿದ್ದರು.

ಇನ್ನು ಆರ್ಯನ್ ಖಾನ್ ಅವರು ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದು, ಅಕ್ಟೋಬರ್ 26ಕ್ಕೆ ಅರ್ಜಿಯ ವಿಚಾರಣೆ ನಡೆಯಲಿದೆ

- Advertisement -

Latest News

error: Content is protected !!