- Advertisement -
![]()
- Advertisement -
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ರಸ್ತೆಯ ಮೂಳೂರು ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟ ಘಟನೆ ಇಂದು ನಡೆದಿದೆ.
ಮೂಳೂರು ಪಡು ನಿವಾಸಿ ಆಯಿಶಾ (42) ಮೃತರು ಎಂದು ಗುರುತಿಸಲಾಗಿದ್ದು, ಅವರು ಅಗತ್ಯ ವಸ್ತು ಖರೀದಿಸಲು ಪೇಟೆ ಬಂದು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರಿನತ್ತ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಹೋಗುತ್ತಿದ್ದ ಕಾರೊಂದು ಡಿಕ್ಕಿಯಾಗಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಸಿದ್ದಾರೆ.
- Advertisement -


