ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಕೇಂದ್ರ ಸರಕಾರವು ಮರಣೋತ್ತರವಾಗಿ ಘೋಷಿಸಲಾದ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಯನ್ನು ನವೆಂಬರ್ 8ರಂದು ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲು ಪೇಜಾವರ ಕಿರಿಯ ಶ್ರೀಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಲಿದ್ದಾರೆ.ಈಗಾಗಲೇ ಶ್ರೀಗಳಿಗೆ ಕೇಂದ್ರ ಸರ್ಕಾರದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಧೀಕೃತ ಆಹ್ವಾನ ಬಂದಿದ್ದು, ಪ್ರಶಸ್ತಿ ಸ್ವೀಕರಿಸುವಂತೆ ಸರ್ಕಾರ ಮನವಿ ಮಾಡಿದೆ. ಪೇಜಾವರ ಹಿರಿಯ ಶ್ರೀಗಳ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸಲ್ಲಿಸಿದ್ದ ಅಪೂರ್ವ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2020ರಲ್ಲಿ ಕೇಂದ್ರ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು.

ಕೇಂದ್ರ ಸರಕಾರವು 2020ನೇ ಸಾಲಿನ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತಾದರೂ ಕೋವಿಡ್-19 ಕಾರಣದಿಂದ ಇದುವರೆಗೆ ಪ್ರಶಸ್ತಿ ಪ್ರದಾನ ನಡೆದಿರಲಿಲ್ಲ.


