Monday, June 8, 2026
Homeಇತರಉಡುಪಿ: ಮನೆಗೆ ನುಗ್ಗಿದ ಕಳ್ಳರು...! ನಗದು, ಬೆಳ್ಳಿ, ಬಂಗಾರದ ಆಭರಣಗಳು ಕಳವು...!

ಉಡುಪಿ: ಮನೆಗೆ ನುಗ್ಗಿದ ಕಳ್ಳರು…! ನಗದು, ಬೆಳ್ಳಿ, ಬಂಗಾರದ ಆಭರಣಗಳು ಕಳವು…!

- Advertisement -
- Advertisement -

ಉಡುಪಿ: ಮನೆ ಮಾಲೀಕರು ಇಲ್ಲದಿದ್ದಾಗ ಮಲ್ಪೆಯ ವಡಭಾಂಡೇಶ್ವರ ದೇವಸ್ಥಾನದ ಬಳಿಯ ಮನೆಗೆ ನುಗ್ಗಿದ ಕಳ್ಳರು ನಗದು, ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಜಯಲಕ್ಷ್ಮಿ ಎಂಬುವವರು ಅಕ್ಟೋಬರ್ 16 ರಂದು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿನಲ್ಲಿರುವ ಮಗನ ಮನೆಗೆ ಹೋಗಿದ್ದು, ಈಕೆ ಇಲ್ಲದಿರುವ ಸಮಯದಲ್ಲಿ ನಗದು, ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಲಾಗಿದ್ದು, ಅಕ್ಟೋಬರ್ 23 ರಂದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಮನೆಯ ಮುಖ್ಯ ಬಾಗಿಲಿನ ಚಿಲಕವನ್ನು ಒಡೆದು ಒಳ ಪ್ರವೇಶಿಸಿ ಬಳಿಕ ಕೋಣೆಯಲ್ಲಿಟ್ಟಿದ್ದ ಅಲ್ಮೆರಾವನ್ನು ಒಡೆದು 7.21 ಲಕ್ಷ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣಳು ಹಾಗೂ 70,000 ನಗದು ತೆಗೆದುಕೊಂಡು ಹೋಗಿದ್ದಾರೆ.

ದೂರಿನ ಆಧಾರದ ಮೇಲೆ ಮಲ್ಪೆ ಪೊಲೀಸ್ ಠಾಣೆ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!