Tuesday, June 9, 2026
Homeಕರಾವಳಿಬೆಳ್ತಂಗಡಿ: ಶಾಮಿಯಾನ ತೊಳೆಯುತ್ತಿರುವಾಗ ನದಿಗೆ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಶಾಮಿಯಾನ ತೊಳೆಯುತ್ತಿರುವಾಗ ನದಿಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಶಾಮಿಯಾನದ ಬಟ್ಟೆಯನ್ನು ತೊಳೆಯುತ್ತಿರುವಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ.

ವೇಣೂರು ಶಕ್ತಿನಗರದ ನಿವಾಸಿ ಹಾಗು ಶಾಮಿಯಾನದ ಕೆಲಸ ಮಾಡುತ್ತಿದ್ದ ಚಂದ್ರ(26) ಮೃತ ದುರ್ದೈವಿ. ಕಾರ್ಯಕ್ರಮಕ್ಕೆ ಅಳವಡಿಸಿದ್ದ ಶಾಮಿಯನವನ್ನು ತೊಳೆಯಲು ನದಿಗೆ ಹೋಗಿದ್ದ ಸಮಯದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವವನ್ನು ಮೇಲಕ್ಕೆತ್ತಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

- Advertisement -

Latest News

error: Content is protected !!