Monday, June 8, 2026
Homeಇತರಹಂಪನಕಟ್ಟೆಯಲ್ಲಿ ನಿರ್ಮಾಣ ಗೊಳ್ಳಲಿದೆ 95 ಕೋಟಿ ರೂ. ವೆಚ್ಚದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌...!

ಹಂಪನಕಟ್ಟೆಯಲ್ಲಿ ನಿರ್ಮಾಣ ಗೊಳ್ಳಲಿದೆ 95 ಕೋಟಿ ರೂ. ವೆಚ್ಚದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌…!

- Advertisement -
- Advertisement -

ಮಂಗಳೂರು: ಹಂಪನಕಟ್ಟೆ ಹಳೆ ಬಸ್‌ ನಿಲ್ದಾಣದ 1.55 ಎಕರೆ ಪ್ರದೇಶದಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಸುಮಾರು 95 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿರುವ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಮ್‌ ರಿಟೈಲ್‌ ಮಳಿಗೆಗಳಿಗೆ ನ.2ರಂದು ಚಾಲನೆ ಸಿಗಲಿದೆ.

ದಶಕದ ಹಿಂದೆ ರೂಪಿಸಿದ್ದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಮ್‌ ರಿಟೈಲ್‌ ಸ್ಪೇಸ್‌ ‘ಸರಕಾರದ ಮೇಲೆ ಯಾವುದೇ ಒತ್ತಡ ಹಾಕದೇ ಪಿಪಿಪಿ ಮಾದರಿಯಲ್ಲಿ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಎಂಎಲ್‌ಸಿಪಿ ಯೋಜನೆ ರೂಪಿಸಲು ಒಪ್ಪಂದ ಮಾಡಿಕೊಂಡಿದ್ದು, ಒಪ್ಪಂದ ಪ್ರಕಾರ 36 ತಿಂಗಳಲ್ಲಿ ಯೋಜನೆ ಸಿದ್ಧಗೊಳ್ಳಲಿದೆ.

ಹಂಪನಕಟ್ಟೆಯ ಜನನಿಬಿಡ ಪ್ರದೇಶದ ಸಂಚಾರ, ಪಾರ್ಕಿಂಗ್‌ ಸಮಸ್ಯೆ ನಿವಾರಿಸಲು, ಮಂಗಳೂರು ಸ್ಮಾರ್ಟ್‌ ಸಿಟಿ ಲಿ.(ಎಂಎಸ್‌ಸಿಎಲ್‌) ಮೂಲಕ ಎಂಎಲ್‌ಸಿಪಿ ಕಟ್ಟಡ ನಿರ್ಮಾಣಕ್ಕೆ ಬಹುತೇಕ ಎಲ್ಲ ಪ್ರಕ್ರಿಯೆಗಳು ಮುಗಿದಿವೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ 2014ರಲ್ಲಿ ಯೋಜನೆ ರೂಪುರೇಷ ಸಿದ್ಧಪಡಿಸಿತ್ತು. ಮುಂದೆ ಮಹಾನಗರ ಪಾಲಿಕೆಯು ಪಿಪಿಪಿ ಮಾದರಿಯಲ್ಲಿ ಯೋಜನೆ ರೂಪಿಸಲು ನಿರ್ಣಯ ಕೈಗೊಂಡಿತ್ತು. ಮಂಗಳೂರು ನಗರವನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಕೇಂದ್ರ ಸರಕಾರ ಆಯ್ಕೆ ಮಾಡಿದ ಬಳಿಕ ಮಂಗಳೂರು ಸ್ಮಾರ್ಟ್‌ ಸಿಟಿ ಲಿ. ಮೂಲಕ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಟ್ಟಡ ಅನುಷ್ಠಾನಕ್ಕೆ ತರಲಾಗುತ್ತಿದೆ.

- Advertisement -

Latest News

error: Content is protected !!