Thursday, July 3, 2025
Homeಕರಾವಳಿಉಡುಪಿ : ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ; ಸಚಿವ ವಿ ಸುನೀಲ್ ಕುಮಾರ್

ಉಡುಪಿ : ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ; ಸಚಿವ ವಿ ಸುನೀಲ್ ಕುಮಾರ್

spot_img
- Advertisement -
- Advertisement -

ಉಡುಪಿ: ಸರೋಜಿನಿ ಮಹಿಷಿ ವರದಿಯಂತೆ ರಾಜ್ಯದಲ್ಲಿನ ಐಟಿ ಬಿಟಿ ಸೇರಿದಂತೆ ಎಲ್ಲಾ ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡುವ ಕುರಿತಂತೆ ,ಕಾನೂನು ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.

ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ನೀಡಿದ ಸಂದೇಶದಲ್ಲಿ ಮಾತನಾಡಿದರು.

ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವ ವಿಚಾರದಲ್ಲಿ ನಿರ್ಧಿಷ್ಟ ನಿಯಮಾವಳಿ ಇಲ್ಲ. ಮುಂದೆ, ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಹಂಚಿಕೆಯಲ್ಲಿ ಏಕರೂಪದ ನಿಯಮಾವಳಿ ಜಾರಿಗೆ ತರಲಾಗುವುದು ಎಂದರು.

ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಇತರರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.

- Advertisement -
spot_img

Latest News

error: Content is protected !!