Sunday, June 7, 2026
Homeಅಪರಾಧಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ;10 ಮಂದಿ ವಿರುದ್ಧ ಪ್ರಕರಣ ದಾಖಲು

ಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ;10 ಮಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣವೊಂದು ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ ಐ ಆರ್ ದಾಖಲಾಗಿರುವುದಾಗಿ ತಿಳಿದುಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೆ ಹಲ್ಲೆ ನಡೆಸಿದ ವಿಡಿಯೋ ಕೂಡ ಗ್ರೂಪ್‌ಗಳಲ್ಲಿ ಹರಿಯಬಿಡಲಾಗಿದೆ. ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಇನ್ನು ವಿಡಿಯೋ ವೈರಲ್ ಆಗಿ ಪ್ರಕರಣ ದಾಖಲಾಗುತ್ತಿದ್ದಂತೇ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!