Saturday, June 6, 2026
Homeಕರಾವಳಿಸುಳ್ಯ: ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು...!

ಸುಳ್ಯ: ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು…!

- Advertisement -
- Advertisement -

ಸುಳ್ಯ: ಮೀನುಗಾರಿಕೆಗೆ ತೆರಳುತ್ತಿದ್ದ ಯುವಕನೊಬ್ಬ ಬೆಳ್ಳಾರೆಯ ನೆತ್ತಾರು ಬಳಿಯ ಮೊಗಪ್ಪೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಯುವಕನನ್ನು ಸಂಪ್ಯದ ಮೂಲೆ ನಿವಾಸಿ ಸುಂದರ ಎಂಬವರ ಪುತ್ರ ಅವಿನಾಶ್ (23) ಎಂದು ಗುರುತಿಸಲಾಗಿದೆ.

ಪುತ್ತೂರು ತಾಲೂಕಿನ ಸಂಪ್ಯಮೂಲೆ ಮಠತ್ತಡ್ಕ ಎಂಬಲ್ಲಿ ಅವಿನಾಶ್ ತನ್ನ ಸ್ನೇಹಿತರೊಂದಿಗೆ ಮೀನು ಹಿಡಿಯುವ ಸಲುವಾಗಿ ಕೆರೆಗೆ ಇಳಿದಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದು, ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ.

ಇನ್ನು ಘಟನಾ ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಆಗಮಿಸಿ ಶೋಧ ಕಾರ್ಯ ಆರಂಭಿಸಿ ಅವಿನಾಶ್‌ ಅವರ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.

ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!