Tuesday, June 9, 2026
Homeಇತರಪುತ್ತೂರು: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ...! ಆರೋಪಿಯನ್ನುಬಂಧಿಸುವಂತೆ ದಲಿತ ಸಂಘಟನೆಗಳ ಒತ್ತಾಯ...!

ಪುತ್ತೂರು: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ…! ಆರೋಪಿಯನ್ನುಬಂಧಿಸುವಂತೆ ದಲಿತ ಸಂಘಟನೆಗಳ ಒತ್ತಾಯ…!

- Advertisement -
- Advertisement -

ಪುತ್ತೂರು : ಮಹಮ್ಮಾಯಿ ದೇವಳದ ಬಳಿಯಲ್ಲಿರುವ ಸ್ವಯಂಘೋಷಿತ ಸಂಘಟನಾ ಕಚೇರಿಯಲ್ಲಿ ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜು ಹೊಸ್ಮಠನನ್ನು ತಕ್ಷಣ ಬಂಧಿಸಬೇಕು ಎಂದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದಕ್ಷಿಣಕನ್ನಡ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿ ಅಕ್ಕ ತಂಗಿ ಇಬ್ಬರಿಗೂ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಆರೋಪಿಯನ್ನು ಬಂಧಿಸಿಲ್ಲ, ಮುಂದಿನ 10 ದಿನಗಳ ಒಳಗಾಗಿ ಆರೋಪಿ ರಾಜು ಹೊಸ್ಮಠನನ್ನು ಬಂಧಿಸದಿದ್ದರೆ, ಮಹಿಳಾ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.

- Advertisement -

Latest News

error: Content is protected !!