Saturday, June 6, 2026
Homeಅಪರಾಧಶಿವಮೊಗ್ಗ: ವೈದ್ಯನಿಂದಲೇ ಲೈಂಗಿಕ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ವೈದ್ಯನಿಂದಲೇ ಲೈಂಗಿಕ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಶಿವಮೊಗ್ಗ: ಆಸ್ಪತ್ರೆಯಲ್ಲೇ ವೈದ್ಯನೊಬ್ಬ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮಹಿಳೆ ಕಿರುಕುಳ ಸಹಿಸಲಾಗದೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.


ಕಿರುಕುಳ ನೀಡಿದ ವೈದ್ಯನ ವಿರುದ್ಧ ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈತನು ಹೊಳೆಹೊನ್ನೂರು ಆರೋಗ್ಯ ಕೇಂದ್ರದ ವೈದ್ಯ ಮಹಿಳೆಯನ್ನು ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ, ಕೆಲಸದ ಸಮಯದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಅಷ್ಟೇ ಅಲ್ಲದೆ ನ.12 ರಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗಿದೆ.


ಆರೋಗ್ಯ ಕೇಂದ್ರದಲ್ಲಿ 30 ನಿದ್ದೆ ಮಾತ್ರೆಗಳನ್ನು ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ವಿಷಯ ತಿಳಿದ ಆಸ್ಪತ್ರೆಯ ಸಿಬ್ಬಂದಿ ಮಹಿಳೆ ಕುಟುಂಬದವರಿಗೆ ತಿಳಿಸಿ ಆಂಬುಲೆನ್ಸ್ ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನಂತರ ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಕೇಂದ್ರದ ದಂತ ವೈದ್ಯ ಮತ್ತು ಆರೋಗ್ಯ ಸಮಿತಿ ಸದಸ್ಯೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!