Thursday, June 4, 2026
Homeಕರಾವಳಿಉಡುಪಿಉಡುಪಿ: ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಅಸಹಾಯಕ ಬಾಲಕಿಯ ರಕ್ಷಣೆ !

ಉಡುಪಿ: ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಅಸಹಾಯಕ ಬಾಲಕಿಯ ರಕ್ಷಣೆ !

- Advertisement -
- Advertisement -

ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕಿ ಅಸಹಾಯಕ ಸ್ಥಿತಿಯಲ್ಲಿದ್ದ ಘಟನೆ ನಡೆದಿದೆ. ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಕ್ಕಳ ಸಹಾಯವಾಣಿಯಿಂದ ದೂರು ಬಂದಿತ್ತು.

ಯೋಗೀಶ್, ಸುರಕ್ಷಾ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಪ್ರಮೋದ್, ನಯನ, ಮತ್ತು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಕಾರ್ಯಕರ್ತರು ಕೂಡಲೇ ಅವರು ರೈಲು ನಿಲ್ದಾಣಕ್ಕೆ ಬಂದು ಬಾಲಕಿಯನ್ನು ರಕ್ಷಿಸಿದರು.

ನಿನ್ನೆ ಹೆಬ್ರಿಯಲ್ಲಿರುವ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು, ಅಲ್ಲಿ ಕೆಲಸ ತುಂಬ ಕಠಿಣವಾಗಿರುವುದರಿಂದ, ಕಾರ್ಖಾನೆಯ ಮಾಲೀಕರಿಗೆ ಹೇಳದೆ, ಸ್ವಂತ ಊರಾದ ಮಧ್ಯಪ್ರದೇಶಕ್ಕೆ ಹೋಗಲು ನಿರ್ಧರಿಸಿ ಇಂದ್ರಾಳಿ ರೈಲು ನಿಲ್ದಾಣಕ್ಕೆ ಬಂದಿದ್ದಾಳೆ ಎಂದು ಬಾಲಕಿ ಹೇಳಿದ್ದಾಳೆ.

ನಂತರ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಆದೇಶದಂತೆ ಬಾಲಕಿಯರ ಬಾಲಮಂದಿರ ನಿಟ್ಟೂರಿನಲ್ಲಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.

- Advertisement -

Latest News

error: Content is protected !!