- Advertisement -
![]()
- Advertisement -
ಮಾನಸಿಕ ಖಿನ್ನತೆಗೆ ಒಳಗಾಗಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಮೃತ(32) ದುರ್ದೈವಿ. ಸುಮಾರು ೪ ದಿನದಿಂದ ಚಿಂತೆಯಲ್ಲಿ ಇದ್ದರು.
ಸುಮಾರು 8 ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು. ತಾನು ವಾಸ ಮಾಡಿಕೊಂಡಿದ್ದ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಗಂಡ ಹಾಗೂ 3 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಈ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


