Thursday, June 4, 2026
Homeಕರಾವಳಿಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರವರ ವಿರುದ್ಧ ಅವಹೇಳನಕಾರಿ ಪದಬಳಕೆ...! ಜಗದೀಶ್ ಕಾರಂತ್ ವಿರುದ್ಧ ಪ್ರಕರಣ...

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರವರ ವಿರುದ್ಧ ಅವಹೇಳನಕಾರಿ ಪದಬಳಕೆ…! ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲು…!

- Advertisement -
- Advertisement -

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದರವರ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿದ ಆರೋಪದಡಿ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರವರು ದೂರು ದಾಖಲಿಸಿಕೊಂಡಿದ್ದಾರೆ.

ಕಳೆದ ಭಾನುವಾರ ಬಂಟ್ವಾಳದ ಕಾರಿಂಜದಲ್ಲಿ ನಡೆದ ಹಿಂದೂ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಜಗದೀಶ್ ಕಾರಂತ್ ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು. ಹಾಗು ಒಂದು ವೇಳೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ ಕೊರಳು ಪಟ್ಟಿ. ಹಿಡಿಯುವ ಎಚ್ಚರಿಕೆಯನ್ನು ಬಹಿರಂಗ ಸಮಾವೇಶದಲ್ಲಿ ನೀಡಿದ್ದರು.

ಒಬ್ಬ ಸರ್ಕಾರಿ ಜವಾಬ್ದಾರಿಯುತ ಅಧಿಕಾರಿಗಾಲ ಮೇಲೆ ಅವಹಳನಕಾರಿ ಪದ ಬಳಕೆ ಮಾಡಿದ ವಿಚಾರವಾಗಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರವರು ದೂರು ನೀಡಿದ್ದಾರೆ.

- Advertisement -

Latest News

error: Content is protected !!