- Advertisement -
![]()
- Advertisement -
ಕಾರ್ಕಳ: ಅನಂತಶಯನ ನಾಗರಬಾವಿ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ದಾನಶಾಲೆ ನಿವಾಸಿ ಗೌರಮ್ಮ ಎಂದು ಗುರುತಿಸಲಾಗಿದೆ.
ಎರಡು ತಿಂಗಳ ಹಿಂದೆಯಷ್ಟೇ ಗೌರಮ್ಮ ಅವರ ಗಂಡ ಹೃದಯಾಘಾತದಿಂದ ನಿಧನರಾಗಿದ್ದರು. ಬುಧವಾರ ಬೆಳಿಗ್ಗೆ ವಾಕಿಂಗ್ ತೆರೆಳುವ ಸಂದರ್ಭ ಈ ಘಟನೆ ಸಂಭವಿಸಿದ್ದು, ಕೂಡಲೇ ಸ್ಥಳೀಯರು ಅವರನ್ನು ಕೆರೆಯಿಂದ ಮೇಲಕ್ಕೆ ಆಸ್ಪತ್ರೆಗೆ ಸಾಗಿಸಿದರಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
- Advertisement -


