Saturday, June 6, 2026
Homeಕರಾವಳಿಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಹೊರಭಾಗದಲ್ಲಿ ಫುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಹರಿದ...

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಹೊರಭಾಗದಲ್ಲಿ ಫುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು !

- Advertisement -
- Advertisement -

ಮಂಗಳೂರು: ಇಲ್ಲಿನ ನಗರದ ಜಂಕ್ಷನ್ ರೈಲು ನಿಲ್ದಾಣದ ಹೊರಗೆ ಸಂಭವಿಸಿದ ಘಟನೆಯಲ್ಲಿ, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ಬೇರೆ ರಾಜ್ಯದ ಇಬ್ಬರು ಕಾರ್ಮಿಕರ ಮೇಲೆ ಹರಿದ ಘಟನೆ ನಡೆದಿದೆ.

ಸಾಮಾನ್ಯವಾಗಿ ಇಲ್ಲಿನ ಫುಟ್‌ಪಾತ್‌ 10ರಿಂದ 15 ಕೂಲಿ ಕಾರ್ಮಿಕರು ಮಲಗಿದ್ದಾರೆ. ನಿಯಂತ್ರಣ ತಪ್ಪಿ ಕಾರು ಇಲ್ಲಿನ ಬೇರೆ ವಾಹನಗಳಿಗೂ ಗುದ್ದಿದೆ. ಹಾಗೂ ಕಾರ್ಮಿಕರ ಮೇಲೆ ಹರಿದಿದೆ. ಅಪಘಾತದಲ್ಲಿ ಅಲ್ಪ ಪ್ರಮಾಣದ ಗಾಯಗಳಾಗಿದೆ.

ಗಾಯಗೊಂಡವರಲ್ಲಿ ಒಬ್ಬರ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಚಾರಣೆ ಮಾಡಿದ್ದಾರೆ.

- Advertisement -

Latest News

error: Content is protected !!