Friday, June 5, 2026
Homeಕರಾವಳಿಬಂಟ್ವಾಳ: ಧಾರ್ಮಿಕ ಸ್ಥಳಗಳಲ್ಲಿ ಹಾಕಲಾಗಿರುವ ಭಗವಧ್ವಜವನ್ನು ತೆಗೆಯಲು ಒತ್ತಾಯಿಸಬೇಡಿ..! ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಬಂಟ್ವಾಳ...

ಬಂಟ್ವಾಳ: ಧಾರ್ಮಿಕ ಸ್ಥಳಗಳಲ್ಲಿ ಹಾಕಲಾಗಿರುವ ಭಗವಧ್ವಜವನ್ನು ತೆಗೆಯಲು ಒತ್ತಾಯಿಸಬೇಡಿ..! ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…!

- Advertisement -
- Advertisement -

ಬಂಟ್ವಾಳ: ತಾಲೂಕಿನ ಧಾರ್ಮಿಕ ಕೇಂದ್ರಗಳ ವ್ಯಾಪ್ತಿಯಲ್ಲಿ ಹಾಕಲಾಗಿರುವ ಧ್ವಜಗಳನ್ನು ಯಾವುದೇ ಕಾರಣಕ್ಕೂ ಅವುಗಳನ್ನು ತೆಗೆಯಲು ಒತ್ತಾಯಿಸಬಾರದು. ಹಾಗು ಅಂತಹ ಸಾಹಸಕ್ಕೆ ಇಲಾಖೆ ಮುಂದಾಗಬೇಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಬಳಿ ಹಾಕಲಾಗಿದ್ದ ಭಗವಧ್ವಜ ತೆರವುಗೊಳಿಸುವಂತೆ ಸ್ಥಳೀಯ ಪೊಲೀಸ್ ಇಲಾಖೆ ಮೇಲಾಧಿಕಾರಿಗಳಿಂದ ಸೂಚನೆ ಬಂದಿದೆ ಎಂಬ ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಸೂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಪ್ರಮುಖರಿಂದ ವಿಷಯ ತಿಳಿದ ಬಂಟ್ವಾಳ ಶಾಸಕ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಲ್ಲಿ ಮಾತುಕತೆ ನಡೆಸಿದ್ದಾರೆ. ಹಾಗು ಇಲಾಖೆಯಿಂದ ಇಂತಹ ಯಾವುದೇ ಆದೇಶ ಇಲ್ಲಿಯವರೆಗೆ ನೀಡಿಲ್ಲ ಎಂದು ಪೋಲಿಸ್ ವರಿಷ್ಠಾಧಿಕಾರಿಯವರಿಗೆ ತಿಳಿಸಿದ್ದಾರೆ.

- Advertisement -

Latest News

error: Content is protected !!