Saturday, June 13, 2026
Homeಇತರಮಾಣಿ: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ...! ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು..!

ಮಾಣಿ: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ…! ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು..!

- Advertisement -
- Advertisement -

ಮಾಣಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ನಡೆದಿದೆ.

ಬಾಲಕನು ರಸ್ತೆ ದಾಟುತ್ತಿದ್ದಾಗ, ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಕಾರು ಅತಿವೇಗವಾಗಿ ಬಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ.

ಘಟನೆಯ ಪರಿಣಾಮ ಬಾಲಕನಿಗೆ ಗಂಭೀರ ಗಾಯಗಳಾಗಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಗಾಯಗೊಂಡ ಬಾಲಕ ಕೂಡಾಜೆ ನಿವಾಸಿಯಾಗಿದ್ದು ಮಾಣಿ ಕರ್ನಾಟಕ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಭರತ್ ಎಂದು ಗುರುತಿಸಲಾಗಿದೆ.

- Advertisement -

Latest News

error: Content is protected !!