Wednesday, June 3, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಇಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಇಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ

- Advertisement -
- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಇಂದಿನಿಂದ ಆರಂಭ. ಐದು ದಿನ ನಡೆಯುವ ದೀಪೋತ್ಸವಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.

ಧರ್ಮಸ್ಥಳ ಪೂರ್ತಿ ವಿದ್ಯುದ್ದೀಪಗಳಿಂದ ಆಕರ್ಷಕವಾಗಿ ಸಿಂಗರಿಸಲಾಗಿದೆ. ಇಂದು ಸಂಜೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಸುಮಾರು 20 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯ ಮೂಲಕ ಧರ್ಮಸ್ಥಳಕ್ಕೆ ಬರಲಿದ್ದಾರೆ. ಬಂದು ಮಂಜುನಾಥನ ದರ್ಶನ ಪಡೆಯಲಿದ್ದಾರೆ.

9ನೇ ವರ್ಷದ ಪಾದಯಾತ್ರೆ ಇದಾಗಿದ್ದು, ಪಾದಯಾತ್ರಿಗಳನ್ನು ಉದ್ದೇಶಿಸಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಲಿದ್ದಾರೆ. ಶ್ರೀ ಮಂಜುನಾಥೇಶ್ವರ ಪಾದಯಾತ್ರಾ ಸಮಿತಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಬಳಿಕ ರಾತ್ರಿ ಮಂಜುನಾಥ ಸ್ವಾಮಿಯ ಹೊಸಕಟ್ಟೆಉತ್ಸವ ನೆರವೇರಲಿದೆ.

- Advertisement -

Latest News

error: Content is protected !!