Thursday, June 4, 2026
Homeಕರಾವಳಿಕುಂದಾಪುರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ

ಕುಂದಾಪುರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ

- Advertisement -
- Advertisement -

ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ, ಬಾರ್ ಅಸೋಸಿಯೇಶನ್ ( ರಿ ) ಕುಂದಾಪುರ ಮತ್ತು ನಾರಾಯಣ ವಿಶೇಷ ಮಕ್ಕಳ ಶಾಲೆ ಮತ್ತು ಅಭಿಯೋಗ ಇಲಾಖೆ ಕುಂದಾಪುರ ಇವರುಗಳ ಜಂಟಿ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ವಿದ್ಯಾರ್ಥಿಗಳಿಗೆ ವಿಕಲ ಚೇತನ ದಿನಾಚರಣೆ ಪ್ರಯುಕ್ತ ನಡೆಸಿದ ಆಟೋಟ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ಮಕ್ಕಳ ಹಕ್ಕುಗಳ ಮಾಸೋತ್ಸವದ ಅಂಗವಾಗಿ ಕೋವಿಡ್ ಅರಿವು ಪುಸ್ತಕವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಮಕ್ಕಳ ಹಕ್ಕುಗಳು ಮತ್ತು ಅವರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ ಇದು ಅಧ್ಯಕ್ಷರಾದ ಗೌರವಾನ್ವಿತ ಧನೇಶ್ ಮುಗಳಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!