Thursday, June 4, 2026
Homeಕರಾವಳಿಉಡುಪಿರಾಜ್ಯಸಭೆ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ದಕ್ಷಿಣಕನ್ನಡ, ಉಡುಪಿ ಜಿಲ್ಲಾ ಪ್ರವಾಸ !

ರಾಜ್ಯಸಭೆ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ದಕ್ಷಿಣಕನ್ನಡ, ಉಡುಪಿ ಜಿಲ್ಲಾ ಪ್ರವಾಸ !

- Advertisement -
- Advertisement -

ಮಂಗಳೂರು: ರಾಜ್ಯಸಭೆ ಸದಸ್ಯ, ವಿರಾಟ್ ಹಿಂದೂಸ್ತಾನ್ ಸಂಗಮ್ ಅಧ್ಯಕ್ಷ ಡಾ.ಸುಬ್ರಮಣಿಯನ್ ಸ್ವಾಮಿ ಇಂದು ಸಂಜೆ 6.15 ಕ್ಕೆ ಅವರು ದೆಹಲಿಯಿಂದ ವಿಶೇಷ ವಿಮಾನ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.

ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿ ಡಿ ನಾಳೆ ಮಂಗಳೂರಿನಿಂದ ಮುಂಜಾನೆ ಶೃಂಗೇರಿಗೆ ತೆರಳಲಿದ್ದಾರೆ. ಬೆಳಗ್ಗೆ 9.30 ಕ್ಕೆ ಶೃಂಗೇರಿ ಮಠಕ್ಕೆ ಭೇಟಿ ನೀಡಿ ಆ ಬಳಿಕ ಮಧ್ಯಾಹ್ನ 3.30 ರ ಸುಮಾರಿಗೆ ಉಡುಪಿಯ ಶ್ರೀಕೃಷ್ಣ ದೇವರ ದರ್ಶನ ಪಡೆಯಲಿದ್ದಾರೆ.

ರಾಜಾಂಗಣದ ಶ್ರೀ ನರಹರಿತೀರ್ಥ ವೇದಿಕೆಯಲ್ಲಿ ಉಡುಪಿಯ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಅವರ ಪರ್ಯಾಯ ಸಮಾರಂಭದಲ್ಲಿ ಹಿಂದೂ ಪ್ರಾಚೀನತೆಯ ಭಾಗವಾಗಿರುವುದಕ್ಕೆ ಹೆಮ್ಮೆ ಪಡುವ ಕುರಿತು ಡಾ.ಸ್ವಾಮಿ ಅವರು ಉಪನ್ಯಾಸ ನೀಡಲಿದ್ದಾರೆ ಸಂಜೆ ನೀಡಲಿದ್ದಾರೆ.

ವಿರಾಟ್ ಹಿಂದೂಸ್ತಾನ್ ಸಂಗಮದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಡಾ.ಸ್ವಾಮಿ ಅವರೊಂದಿಗೆ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!