Wednesday, June 3, 2026
Homeಕರಾವಳಿಉಡುಪಿಉಡುಪಿ: ಅನಾರೋಗ್ಯದ ಕಾರಣ 15 ವರ್ಷದ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ !

ಉಡುಪಿ: ಅನಾರೋಗ್ಯದ ಕಾರಣ 15 ವರ್ಷದ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ !

- Advertisement -
- Advertisement -

ಉಡುಪಿ: ನಗರದ ಗರದ ಗರಡಿ ಬನ್ನಂಜೆ ಬಳಿ 15 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತರನ್ನು ಬಾಗಲಕೋಟೆ ಮೂಲದ ದೀಪಾ ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಬಾಲಕಿ ಸ್ಥಳೀಯ ಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಳು.

ಆಕೆ ಯಾವುದೋ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಈ ರೀತಿ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ನಗರ ಠಾಣೆಯ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲು ಸಹಕರಿಸಿದರು.

- Advertisement -

Latest News

error: Content is protected !!