Wednesday, June 3, 2026
Homeಕರಾವಳಿಉಡುಪಿಬ್ರಹ್ಮಾವರ : ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿ ಸಭೆ

ಬ್ರಹ್ಮಾವರ : ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿ ಸಭೆ

- Advertisement -
- Advertisement -

ಬ್ರಹ್ಮಾವರ: ಶ್ರೀಕೃಷ್ಣ ಮಠ ಉಡುಪಿ ಇದರ ಶ್ರೀಕೃಷ್ಣಾಪುರ ಮಠದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ನಡೆಯಲಿರುವ ಹಸಿರು ಹೊರೆಕಾಣಿಕೆ ಸಮರ್ಪಣೆಯ ಬಗ್ಗೆ ಪೂರ್ವಭಾವಿ ಸಭೆ ಬ್ರಹ್ಮಾವರದ ಬಂಟರ ಭವನದಲ್ಲಿ ನಡೆಯಿತು.

ಈ ಸಭೆಯ ಸಂಘಟಕರು ಹೊರೆಕಾಣಿಕೆ ಸಮಿತಿಯ ಸಂಚಾಲಕರು ಬೈಕಾಡಿ ಪ್ರಸಾದ್ ಶೆಟ್ಟಿ ಅವರು ಮಾತನಾಡಿ ಬ್ರಹ್ಮಾವರ ವಲಯದಿಂದ ವೈಭವಯುತವಾದ ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸುವಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು.

ಬ್ರಹ್ಮಾವರ ವಲಯದ ಗ್ರಾಮಗಳಾದ ಬೈಕಾಡಿ , ಹಾರಾಡಿ ವಾರಂಬಳ್ಳಿ , ಕುಮ್ರಗೋಡು, ಹಂದಾಡಿ , ಮಟಪಾಡಿ ಚಾಂತಾರು ಹೇರೂರು, ಆರೂರು ನೀಲಾವರ , ವಲಯದಿಂದ ನೂರಾರು ವಾಹನಗಳಲ್ಲಿ ಹಸಿರು ಹೊರೆಕಾಣಿಕೆ ಸಮರ್ಪಿಸುವುದು ಎಂದು ನಿರ್ಧರಿಸಲಾಯಿತು.

ಈ ಸಭೆಯಲ್ಲಿ ಪರ್ಯಾಯ ಸಮಿತಿಯ ಅಧ್ಯಕ್ಷರು ಕುಂಭಾಶಿ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಸಮಿತಿಯ ಪ್ರಮುಖರಾದ ಬಿ ವಿ ಲಕ್ಷ್ಮಿನಾರಾಯಣ ಬ್ರಹ್ಮಾವರ ಬಂಟರ ಸಂಘದ ಅಧ್ಯಕ್ಷರಾದ ರಾಜಾರಾಂ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಚ್ ನಿತ್ಯಾನಂದ ಶೆಟ್ಟಿ , ಮುಂತಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!