Thursday, June 4, 2026
Homeಕರಾವಳಿಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಇಂದು ಮಂಗಳೂರಿಗೆ !

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಇಂದು ಮಂಗಳೂರಿಗೆ !

- Advertisement -
- Advertisement -

ಮಂಗಳೂರು ಪ್ರವಾಸ ಕೈಗೂಂಡ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಇವರು ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 11: 30 ಕ್ಕೆ ಮಂಗಳೂರಿನಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಪತ್ರಿಕಾ ಗೋಷ್ಠಿಯಲ್ಲಿ ಇವರು ಭಾಗವಹಿಸಲಿದ್ದಾರೆ.

ಆ ನಂತರ ಉಪ್ಪಿನಂಗಡಿಯಲ್ಲಿ ಪೊಲೀಸರ ಕ್ರೌರ್ಯದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಂತ್ರಸ್ತರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯಾಧ್ಯಕ್ಷರ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಹಾಗೂ ಇತರ ಮುಖಂಡರು, ಕಾರ್ಯಕರ್ತರು ಸಾಥ್ ನೀಡಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!