ಮಾಣಿ: ನೈರ್ಮಲ್ಯ ಎಲ್ಲರ ಜವಾಬ್ದಾರಿ, ದಿನನಿತ್ಯದ ಚಟುವಟಿಕೆಯಲ್ಲಿ ಸ್ವಚ್ಛತೆಯನ್ನು ಕಡ್ಡಾಯವಾಗಿ ಸೇರಿಸಿಕೊಳ್ಳಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು. ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛತೆಯ ಬಗ್ಗೆ ಜರಗಿದ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಿಂದ ಸಿಗುವ ಮಾಹಿತಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಇತರರಿಗೂ ತಿಳಿಹೇಳಬೇಕು ಎಂದು ಅವರು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಪಂಚಾಯತ್ತಿನಿಂದ ಆಗಮಿಸಿದ್ದ ಡೊಂಬಯ್ಯರವರು ಕಸವೀಲೇವಾರಿ ಮತ್ತು ಇನ್ನಿತರ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಚ್ಛತೆ ಮತ್ತು ಕಸವಿಲೇವಾರಿಗಾಗಿ ಗ್ರಾಮ ಪಂಚಾಯತ್ ಹಮ್ಮಿಕೊಂಡಿರುವ ಯೋಜನೆಯ ಬಗ್ಗೆ ಸಭೆಗೆ ಸವಿವರವಾಗಿ ತಿಳಿಸಿದರು.
ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ, ಆರೋಗ್ಯ ಸಹಾಯಕಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸ್ವಚ್ಛತಾ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




