Saturday, June 6, 2026
Homeಕರಾವಳಿಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಭೇಟಿ

ಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಭೇಟಿ

- Advertisement -
- Advertisement -

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರ ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು.

ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗೌರವದಿಂದ ಬರಮಾಡಿಕೊಂಡರು.

ಇದೇ ವೇಳೆ ಮಾತನಾಡಿದ ಅವರು, ‘ತಾಯಿ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮನಸಾರೆ ಪ್ರತಿಯೊಬ್ಬರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೆ’ ಎಂದರು.

ಹಾಗೇ ನನಗೆ ಮಂಗಳೂರಿನ ಪಬ್ಬಾಸ್‌ ಐಸ್‌ಕ್ರೀಂ ತಿನ್ನುವ ಆಸೆ ಆದರೆ ಗಂಟಲು ಸಮಸ್ಯೆ ಇರುವುದರಿಂದ ಸಾಧ್ಯ ಇಲ್ಲ. ಪ್ರತೀ ವರ್ಷ ಇಲ್ಲಿನ ದೇವಸ್ಥಾನಕ್ಕೆ ಬರುತ್ತಿದ್ದೇನೆ. ಜೊತೆಗೆ ಕರಾವಳಿ ಖಾದ್ಯಗಳು ನನಗೆ ತುಂಬಾ ಇಷ್ಟ ಎಂದರು.

ದೇವಳದ ಆಡಳಿತ ಮೊಕ್ತೇಸರ ಎನ್. ಎಸ್ ಮನೋಹರ್ ಶೆಟ್ಟಿ, ಅರ್ಚಕ ನರಸಿಂಹ ಭಟ್ ಶಿವಶಂಕರ್ ವರ್ಮ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ನಾಗೇಶ್ ಬಪ್ಪನಾಡು ಉಪಸ್ಥಿತರಿದ್ದರು.

- Advertisement -

Latest News

error: Content is protected !!