Thursday, September 10, 2026
Homeಇತರಬ್ರಹ್ಮಾವರ: ಕೊರಗ ಸಮುದಾಯದ ಮನೆಯೊಂದರ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಹಲ್ಲೆ ಆರೋಪ...!

ಬ್ರಹ್ಮಾವರ: ಕೊರಗ ಸಮುದಾಯದ ಮನೆಯೊಂದರ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಹಲ್ಲೆ ಆರೋಪ…!

- Advertisement -
- Advertisement -

ಬ್ರಹ್ಮಾವರ: ತಡ ರಾತ್ರಿಯವರೆಗೆ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿದ್ದ ಬ್ರಹ್ಮಾವರ ತಾಲೂಕಿನ ಕೋಟೆತಟ್ಟು ಬಾರಿಕೆರೆ ಕೊರಗ ಸಮುದಾಯದ ವ್ಯಕ್ತಿಯೊಬ್ಬರ ಮನೆಗೆ ಕೋಟ ಪೊಲೀಸರು ಭೇಟಿ ನೀಡಿ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೆಹಂದಿ ಕಾರ್ಯಕ್ರಮದಲ್ಲಿ ತಡರಾತ್ರಿಯವರೆಗೆ ಡಿಜೆ ಅಳವಡಿಸಲಾಗಿತ್ತು ಎಂದು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನು ಮದುಮಗನ ಮೇಲೂ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದು, ಜತೆಗೆ ಪೊಲೀಸರು ತಮ್ಮನ್ನು ಠಾಣೆಗೆ ಕರೆದೊಯ್ದು ಬಟ್ಟೆ ತೆಗೆದು ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊರಗ ಸಮಾಜದ ಮುಖಂಡರು ಭೇಟಿ ನೀಡಿದ್ದು, ಡಿಜೆ ಶಬ್ದದಿಂದ ಸ್ಥಳೀಯರಿಗೆ ಕಿರಿಕಿರಿ ಉಂಟಾಗಿದ್ದರಿಂದ ಕ್ರಮ ಕೈಗೊಳ್ಳಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಈ ಘಟನೆಯನ್ನು ದಲಿತ ಸಂಘರ್ಷ ಸಮಿತಿಯು ಖಂಡಿಸಿದ್ದು, ಲಾಠಿ ಬೀಸಿದ ಪೊಲೀಸ್ ಸಿಬ್ಬಂದಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದ ಕೋಟಾ ಠಾಣಾಧಿಕಾರಿ ಸಂತೋಷ್ ಅವರನ್ನು ಅಮಾನತು ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಆಗ್ರಹಿಸಿದ್ದಾರೆ. ಹಲ್ಲೆ ನಡೆಸಿದಂತಹ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸದಿದ್ದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ

- Advertisement -

Latest News

error: Content is protected !!