Saturday, June 13, 2026
Homeತಾಜಾ ಸುದ್ದಿರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ- ಗುರುವಾರದಿಂದ ಎರಡು ವಾರ ಶಾಲೆ ಬಂದ್

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ- ಗುರುವಾರದಿಂದ ಎರಡು ವಾರ ಶಾಲೆ ಬಂದ್

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.

ಇಂದು ತಜ್ಞರ ಜೊತೆಗಿನ ಸಭೆ ಬಳಿಕ ಅಶೋಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು.

9 ಮತ್ತು 10ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 8ನೇ ತರಗತಿ ನಾಳೆಯಿಂದಲೇ ಬಂದ್ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

- Advertisement -

Latest News

error: Content is protected !!