Saturday, June 13, 2026
Homeತಾಜಾ ಸುದ್ದಿಸಕಲೇಶಪುರ: ಜೀಪು ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಸಕಲೇಶಪುರ: ಜೀಪು ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರು ಯುವಕರು ಸ್ಥಳದಲ್ಲೇ ಸಾವು

- Advertisement -
- Advertisement -

ಸಕಲೇಶಪುರ: ಜೀಪು ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಪಟ್ಟಣದ ಪಶು ಆಸ್ಪತ್ರೆ ಮುಂಭಾಗ ನಿನ್ನೆ ರಾತ್ರಿ ಸಂಭವಿಸಿದೆ.

ಮೃತ ಯುವಕರನ್ನು ಸಕಲೇಶಪುರ ತಾಲ್ಲೂಕಿನ ಹಲ್ಲಹಳ್ಳಿ ಗ್ರಾಮದ ಮನೋಜ್‌ಕುಮಾರ್‌ (24) ಹಾಗೂ ಆಲೂರು ತಾಲ್ಲೂಕು ಬೆಟ್ಟದಳ್ಳಿ ಗ್ರಾಮದ ಶಶಾಂಕ್‌ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!