Thursday, June 4, 2026
Homeಕರಾವಳಿಬಂಟ್ವಾಳ: ಪ್ರಚೋದನಕಾರಿ ಹೇಳಿಕೆ, ಯುವಕನ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಪ್ರಚೋದನಕಾರಿ ಹೇಳಿಕೆ, ಯುವಕನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ: ಇತ್ತೀಚೆಗೆ ಮದುವೆಯ ಆರತಕ್ಷತೆ ವೇಳೆ ಹಿಂದೂ ದೇವರ ಕೊರಗಜ್ಜನ ವೇಷ ಧರಿಸಿ ಸ್ನೇಹಿತರೊಂದಿಗೆ ನೃತ್ಯ ಮಾಡಿದ ವರನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರಿನ ಖಾಸಗಿ ಬ್ಯಾಂಕ್‌ನ ಉದ್ಯೋಗಿ ವಿಷ್ಣು ಪ್ರಸಾದ್ ನಿಡ್ಡಾಜೆ ಅವರು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಕಾಮೆಂಟ್ ಬರೆದಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಪಿಎಫ್‌ಐ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

- Advertisement -

Latest News

error: Content is protected !!