Monday, June 30, 2025
Homeಇತರಜನವರಿ 21 ರಿಂದ, 1 -9ನೇ ತರಗತಿಗಳು ಮುಚ್ಚಲು ಕೇರಳ ಸಿಎಂ ನಿರ್ಧಾರ

ಜನವರಿ 21 ರಿಂದ, 1 -9ನೇ ತರಗತಿಗಳು ಮುಚ್ಚಲು ಕೇರಳ ಸಿಎಂ ನಿರ್ಧಾರ

spot_img
- Advertisement -
- Advertisement -

ಕೇರಳ: ಕೊರೋನಾ ಮತ್ತು ಒಮಿಕ್ರಾನ್ ಹೆಚ್ಚಳದ ಹಿನ್ನಲೆಯಲ್ಲಿ ಕೇರಳದಲ್ಲಿ ಜನವರಿ 21 ರಿಂದ ಕೇರಳದಲ್ಲಿ ಒಂದರಿಂದ ಒಂಭತ್ತನೇ ತನಕದ ಶಾಲೆಗಳು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಅವಲೋಕನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.

21 ರಿಂದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯಲಿದ್ದು, ಎರಡು ಫೆಬ್ರವರಿ ಎರಡನೇ ವಾರದ ತನಕ ಶಾಲೆಗಳನ್ನು ಮುಚ್ಚಲು ತೀರ್ಮಾನಿಸಲಾಗಿದ್ದು, ಬಳಿಕ ಕೋವಿಡ್ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ. ಆದರೆ 10 ರಿಂದ 12 ನೇ ತರಗತಿ ತನಕ ಎಂದಿನಂತೆ ತರಗತಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ನಿಯಂತ್ರಣ ಸದ್ಯಕ್ಕೆ ಅಗತ್ಯ ಇಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ಕೋವಿಡ್ ಹೆಚ್ಚಳದ ಹಿನ್ನಲೆಯಲ್ಲಿ ಕ್ಲಸ್ಟರ್ ಗಳನ್ನು ಗುರುತಿಸಿ ನಿಯಂತ್ರಣ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದರು ಸರಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಗರ್ಭಿಣಿಯರಿಗೆ ವರ್ಕ್ ಫ್ರಮ್ ಹೋಂ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇನ್ನು ಸರಕಾರಿ, ಸಾರ್ವಜನಿಕ ವಲಯ, ಸಹಕಾರಿ ಸಂಸ್ಥೆಗಳಲ್ಲಿ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಆನ್‌ಲೈನ್ ಆಗಿ ನಡೆಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

10,11, 12 ನೇ ತರಗತಿ ಯ ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಿ ವ್ಯಾಕ್ಸಿನ್ ನೀಡಲು ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಮುಂದಾಗುವಂತೆ ಮುಖ್ಯಮಂತ್ರಿ ಸಲಹೆ ನೀಡಿದರು.

- Advertisement -
spot_img

Latest News

error: Content is protected !!