Friday, June 5, 2026
Homeತಾಜಾ ಸುದ್ದಿಭೀಕರ ಅಪಘಾತ, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ದುರ್ಮರಣ !

ಭೀಕರ ಅಪಘಾತ, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ದುರ್ಮರಣ !

- Advertisement -
- Advertisement -

ಹಾವೇರಿ: ದುರಂತದ ಘಟನೆಯಲ್ಲಿ, ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ರಟ್ಟೆಹಳ್ಳಿ ಬಳಿಯ ಕಡೂರಿನಲ್ಲಿ ಅಪಘಾತ ಸಂಭವಿಸಿದೆ.

ಮೃತರು ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದವರು. ಡಿಕ್ಕಿಯ ರಭಸಕ್ಕೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ರಟ್ಟೀಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕಡೂರು ಬಳಿಯ ರಸ್ತೆಯ ತಿರುವಿನಲ್ಲಿ ಟ್ರಕ್ ನಿಯಂತ್ರಣ ತಪ್ಪಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಹಿಂದೆ ಇದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ರಟ್ಟೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!