Sunday, June 7, 2026
Homeಇತರಇವತ್ತಿನ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ: ವಿ.ಸುನಿಲ್ ಕುಮಾರ್

ಇವತ್ತಿನ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ: ವಿ.ಸುನಿಲ್ ಕುಮಾರ್

- Advertisement -
- Advertisement -

ಬೆಂಗಳೂರು: ಇವತ್ತಿನ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಶುಕ್ರವಾರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು ಕೆಲವೊಂದಿಷ್ಟು ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ.

12 ಸಾವಿರ ಕೋಟಿಯಷ್ಟು ಬೇರೆ ಬೇರೆ ಇಲಾಖೆಯಿಂದ ಹಣ ಬರಬೇಕಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂಎಸ್‌ಎಸ್ಬಿ ಸೇರಿ ಹಲವು ಇಲಾಖೆಗಳಿಂದ ಹಣ ಬರುವುದು ಬಾಕಿ ಇದೆ ಎಂದು ತಿಳಿಸಿದರು.

ಕೆಇಆರ್ ಸಿ – ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಮೊದಲು, ಅವರು ವರದಿ ಕೊಡಲಿ. ವರದಿ ಕೊಟ್ಟ ಬಳಿಕ ವಿದ್ಯುತ್ ದರ ಏರಿಕೆಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!