Monday, May 6, 2024
Homeಕರಾವಳಿಮಂಗಳೂರು: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್‌ಗೆ ಅನುಮೋದನೆ ನೀಡಿದ ಪ್ರಧಾನಿ, ನಳಿನ್ ಕುಮಾರ್ ಕಟೀಲ್ ಧನ್ಯವಾದ

ಮಂಗಳೂರು: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್‌ಗೆ ಅನುಮೋದನೆ ನೀಡಿದ ಪ್ರಧಾನಿ, ನಳಿನ್ ಕುಮಾರ್ ಕಟೀಲ್ ಧನ್ಯವಾದ

spot_img
- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ ಅಂತಿಮ ಒಪ್ಪಿಗೆ ನೀಡಿದೆ. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಪಾಲು ಆಗಿರುವ ಶೇಕಡಾ 50 ರಷ್ಟು ಹಣವನ್ನು ಬಿಡುಗಡೆ ಮಾಡಲು ಅದು ತನ್ನ ಅಂತಿಮ ಅನುಮತಿಯನ್ನು ನೀಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಉಳಿದ ಶೇ.50 ವೆಚ್ಚದ ಹೂಡಿಕೆಯೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ.

ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರಾಸಾಯನಿಕ ಸಚಿವ ಭಗವಂತ ಖೂಬಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರು ಮಾಡಲು ಕಾರಣಕರ್ತರಾದ ಹಿಂದಿನ ಕೇಂದ್ರದ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಸಚಿವರಾದ ದಿವಂಗತ ಅನಂತ್ ಕುಮಾರ್, ಸದಾನಂದ ಗೌಡ ಮತ್ತು ಮನ್ಸುಖ್ ಮಾಂಡವೀಯ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 104 ಎಕರೆ ಕೆಐಎಡಿಬಿ ಜಾಗದಲ್ಲಿ ಗಂಜಿಮಠದ ಬಳಿ ಈ ಯೋಜನೆಯನ್ನು ಸ್ಥಾಪಿಸಲಾಗುವುದು.

- Advertisement -
spot_img

Latest News

error: Content is protected !!