Sunday, June 7, 2026
Homeತಾಜಾ ಸುದ್ದಿಕಡಬ: ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ; ವ್ಯಕ್ತಿ ಸ್ಥಿತಿ ಗಂಭೀರ

ಕಡಬ: ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ; ವ್ಯಕ್ತಿ ಸ್ಥಿತಿ ಗಂಭೀರ

- Advertisement -
- Advertisement -

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಭಟ್ಕಳದಲ್ಲಿ ನಡೆದಿದೆ.


ವ್ಯಕ್ತಿಯೊಬ್ಬರು ಕಾಡು ಪ್ರದೇಶದಲ್ಲಿರುವ ನಡುತೋಪಿನಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಧಾವಿಸಿ ಆತನ ಮೇಲೆ ದಾಳಿ ನಡೆಸಿದ್ದು, ತಲೆ ಮತ್ತು ಸೊಂಟದ ಭಾಗಕ್ಕೆ ಪೆಟ್ಟು ಬಿದ್ದು ಗಂಭೀರ ಗೊಂಡಿದ್ದಾರೆ.


ಗಾಯಗೊoಡ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆಯಲ್ಲಿ ನೆಡುತೋಪುವಿನಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದರು. ಇವರನ್ನು ಹಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು ಆಗಮಿಸಿದ್ದರು.

- Advertisement -

Latest News

error: Content is protected !!