Friday, June 5, 2026
Homeಕರಾವಳಿಉಡುಪಿಕಾರ್ಕಳ: ರಿಯಲ್ ಎಸ್ಟೇಟ್ ಉದ್ಯಮಿಗೆ ಹಲ್ಲೆ, ಕೊಲೆ ಬೆದರಿಕೆ..!

ಕಾರ್ಕಳ: ರಿಯಲ್ ಎಸ್ಟೇಟ್ ಉದ್ಯಮಿಗೆ ಹಲ್ಲೆ, ಕೊಲೆ ಬೆದರಿಕೆ..!

- Advertisement -
- Advertisement -

ಕಾರ್ಕಳ: ಹಿರ್ಗಾನ ಗ್ರಾಮದ ಗಲಪಾದೆ ಎಂಬಲ್ಲಿ ಹಣ ನೀಡುವುದಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದ ವ್ಯಕ್ತಿ ಕರೆ ಸ್ವೀಕರಿಸುತ್ತಿಲ್ಲ ಎಂದು ಕೋಪಗೊಂಡ ಬೈಕಂಪಾಡಿಯ ಹಬೀಬ್ ಎಂಬಾತ ಹಣ ಪಡೆದಿದ್ದ ದ.ಕ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಇಲಿಯಾಸ್ ಎಂಬವರಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಗಾದ ಲ್ಯಾಂಡ್ ಲಿಂಕ್ಸ್ ಕೆಲಸಗಾರ ಇಲಿಯಾಸ್ ಅವರು ಬೈಕಂಪಾಡಿಯ ಹಬೀಬ್ ಹಾಗೂ ಆತನ ಅಣ್ಣ ಸಿದ್ದೀಕ್ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ದಾಖಲಿಸಿದ್ದಾರೆ .

ಇಲಿಯಾಸ್ ಅವರು ಕೆಲಸ ಮಾಡುತ್ತಿದ್ದ ಮಂಗಲಪಾದೆಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ತಕರಾರು ತೆಗೆದು ಪಿಕ್ಕಾಸಿನ ಹಿಡಿಯಿಂದ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ಹಲ್ಲೆಯಿಂದ ದೈಹಿಕವಾಗಿ ನೋವು ಉಂಟಾಗಿದ್ದು ಇದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Latest News

error: Content is protected !!