Saturday, June 6, 2026
Homeತಾಜಾ ಸುದ್ದಿಪುತ್ತೂರು: ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

- Advertisement -
- Advertisement -

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಲ್ನಾಡು ನಿವಾಸಿ ವಿಶ್ವ ಪಂಡಿತ್ತೂರ್ ಅವರು ಜ. 27ರಂದು ಸಂಜೆ ನಿಧನರಾದರು.


ಕ್ಷೇತ್ರದ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಜವಾಬ್ದಾರಿಯನ್ನು ನಿರ್ವಹಿಸಿದ ಇವರು ಪುಂಡಿತ್ತೂರು ದಿ. ಸುಬ್ಬಣ್ಣ ಭಟ್ ರವರ ಪುತ್ರರಾಗಿದ್ದಾರೆ. ಪಂಡಿತ್ತೂರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದು, ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದವರು.


ಪoಡಿತ್ತೂರ್ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಮನೆಯಲ್ಲೇ ಆರೈಕೆ ಪಡೆಯುತ್ತಿದ್ದರು.
ಮೃತರು ಪತ್ನಿ ಅನುರಾಧ ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!