Saturday, June 6, 2026
Homeತಾಜಾ ಸುದ್ದಿಕುಪ್ಪೆಪದವು: ಬ್ಯಾಂಕ್ ಗೆ ಸಂಬಂಧಪಟ್ಟ ವಿಚಾರದಲ್ಲಿ ಮನನೊಂದು ಬ್ಯಾಂಕ್ ನ ಆಡಳಿತಾಧಿಕಾರಿ ಆತ್ಮಹತ್ಯೆಗೆ ಶರಣು

ಕುಪ್ಪೆಪದವು: ಬ್ಯಾಂಕ್ ಗೆ ಸಂಬಂಧಪಟ್ಟ ವಿಚಾರದಲ್ಲಿ ಮನನೊಂದು ಬ್ಯಾಂಕ್ ನ ಆಡಳಿತಾಧಿಕಾರಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಕುಪ್ಪೆಪದವು: ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನಾಗರಾಜ್ ರಾವ್ (58) ಎಂದು ಗುರುತಿಸಲಾಗಿದೆ.

ವಾಮಂಜೂರು ತಿರುವೈಲು ತಾರಿಗುಡ್ಡೆ ನಿವಾಸಿಯಾಗಿರುವ ರಾವ್ ಅವರು ಬ್ಯಾಂಕ್ ಗೆ ಸಂಭಂದಪಟ್ಟ ವಿಚಾರದಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಗುರುವಾರ ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ರಾವ್ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!