ವಿಟ್ಲ: ಸಾಲೆತ್ತೂರಿನಲ್ಲಿ ಅನ್ಯ ಧರ್ಮದ ಯುವಕರ ತಂಡವೊಂದು ಮದುವೆ ಸಂಭ್ರಮದಲ್ಲಿ ತುಳುನಾಡಿನ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ವರ ಉಮರುಲ್ ಬಾಷಿತ್ ನನ್ನು ಕೇರಳದ ಕೊಚ್ಚಿಯ ನಡುಂಬನ್ ಶೇರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೇರಳದ ಕೊಚ್ಚಿಯ ನಡುಂಬನ್ ಶೇರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಆರೋಪಿಯನ್ನು ಇದೀಗ ವಿಟ್ಲ ಠಾಣಾ ಪೊಲೀಸರು ಕರೆದುಕೊಂಡು ಬರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರಗಜ್ಜನ ವೇಷ ಧರಿಸಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸಂಬಂಧ ವಿಟ್ಲ ಪಡ್ನೂರು ಗ್ರಾಮದ ವ್ಯಕ್ತಿಯೊಬ್ಬರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಿಂದೂಗಳ ಧಾರ್ಮಿಕ ಭಾವನೆಗೆ ಅಪಮಾನಗೊಳಿಸಿ ಧಕ್ಕೆ ತಂದಿದ್ದ, ವರ, ವಧುವಿನ ಮನೆಯವರು ಹಾಗೂ ಕೃತ್ಯದಲ್ಲಿ ತೊಡಗಿರುವ ವರನ ಸ್ನೇಹಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.