Thursday, June 4, 2026
Homeಕರಾವಳಿಉಡುಪಿತಾರಕಕ್ಕೇರಿದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ- ರಾಜ್ಯದ ಎಲ್ಲಾ ಪ್ರೌಢಶಾಲೆ ಮತ್ತು ಪದವಿ...

ತಾರಕಕ್ಕೇರಿದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ- ರಾಜ್ಯದ ಎಲ್ಲಾ ಪ್ರೌಢಶಾಲೆ ಮತ್ತು ಪದವಿ ಕಾಲೇಜಿಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ ಬೆನ್ನಲ್ಲೇ, ಪರಿಸ್ಥಿತಿಯನ್ನು ನಿಯಂತ್ರಿಸೋದಕ್ಕಾಗಿ ರಾಜ್ಯ ಸರ್ಕಾರ, ನಾಳೆಯಿಂದ ರಾಜ್ಯದ ಎಲ್ಲಾ ಪದವಿ ಕಾಲೇಜುಗಳಿಗೆ ಮೂರು ದಿನ ರಜೆಯನ್ನು ಘೋಷಣೆ ಮಾಡಿದೆ.

ಈ ಮೂಲಕ ಪರಿಸ್ಥಿತಿ ನಿಯಂತ್ರಿಸೋದಕ್ಕೆ ಮುನ್ಸೂಚನೆ ಕ್ರಮ ಕೈಗೊಂಡಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾನು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ ಕಾಲೇಜುಗಳ ನಿರ್ವಹಣೆ ಮತ್ತು ಕರ್ನಾಟಕದ ಜನರಿಗೆ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢ ಶಾಲಾ ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟ ಎಲ್ಲರೂ ಸಹಕರಿಸುವಂತೆ ಕೋರಲಾಗಿದೆ.

- Advertisement -

Latest News

error: Content is protected !!